Sripadarajara Ugabhogagalu
ಧ್ಯಾನವು ಕೃತಯುಗದಿ
ಯಜನ ಯಜ್ಞವು ತ್ರೇತಾಯುಗದಿ
ದಾನವಾಂತಕನ ದೇವತಾರ್ಚನೆ ದ್ವಾಪರಯುಗದಿ
ಆ ಮಾನವರಿಗೆಷ್ಟು ಫಲವೊ ಅಷ್ಟು ಫಲವು
ಕಲಿಯುಗದಿ ಗಾನದಲಿ ಕೇಶವಯೆನಲು
ಕೈಗೂಡುವನು ರಂಗವಿಠಲ
ನಿನ್ನ ನಂಬಿದ ಮೇಲೆ ಇನ್ನು ಭಯವ್ಯಾತಕೆ
ಪನ್ನಗಾಧಿಶಯನ ಮನ್ನಿಸಯ್ಯ
ಮುನ್ನ ಭಕುತರನೆಲ್ಲ ಚೆನ್ನಾಗಿ ಪಾಲಿಸಿದ
ಯಜನ ಯಜ್ಞವು ತ್ರೇತಾಯುಗದಿ
ದಾನವಾಂತಕನ ದೇವತಾರ್ಚನೆ ದ್ವಾಪರಯುಗದಿ
ಆ ಮಾನವರಿಗೆಷ್ಟು ಫಲವೊ ಅಷ್ಟು ಫಲವು
ಕಲಿಯುಗದಿ ಗಾನದಲಿ ಕೇಶವಯೆನಲು
ಕೈಗೂಡುವನು ರಂಗವಿಠಲ
ನಿನ್ನ ನಂಬಿದ ಮೇಲೆ ಇನ್ನು ಭಯವ್ಯಾತಕೆ
ಪನ್ನಗಾಧಿಶಯನ ಮನ್ನಿಸಯ್ಯ
ಮುನ್ನ ಭಕುತರನೆಲ್ಲ ಚೆನ್ನಾಗಿ ಪಾಲಿಸಿದ
ಎನ್ನೊಡೆಯ ರಂಗವಿಠ್ಠಲ ಎನ್ನ ದೊರೆಯೇ !
ಭವವೆಂಬ ಅಡವಿಯಲ್ಲಿ ತಾಪತ್ರಯದಿ ಸಿಲುಕಿ
ಭಯಗೊಳ್ಳದಂತೆ ಗೆಲ್ಲುವುದಕೆ
ಭವವೆಂಬ ಅಡವಿಯಲ್ಲಿ ತಾಪತ್ರಯದಿ ಸಿಲುಕಿ
ಭಯಗೊಳ್ಳದಂತೆ ಗೆಲ್ಲುವುದಕೆ
ಶ್ರೀಹರಿನಾಮ ಹೊರತಾಗಿ ಮತ್ತುಂಟೆ
ನಿನ್ನ ಚರಣದಲ್ಲಿಟ್ಟು ಸಲಹೋ ನಮೋ ರಂಗವಿಠ್ಠಲ !
Comments
Post a Comment